Thursday, December 2, 2021

ಅಮೆರಿಕ: 24 ಗಂಟೆಯಲ್ಲಿ 4,491 ಮಂದಿ ಸಾವು

Follow Us

ವಾಷಿಂಗ್ಟನ್: ಅಮೆರಿಕದಲ್ಲಿ ಬುಧವಾರ ರಾತ್ರಿ 8.30ರಿಂದ 24 ಗಂಟೆಯಲ್ಲಿ 4,491 ಮಂದಿ ಜನರು ಮೃತಪಟ್ಟಿದ್ದಾರೆ.
ಕೊರೋನಾ ಅಟ್ಟಹಾಸ ತಣ್ಣಗಾಗುವುದರೊಳಗಾಗಿ ಅಮೆರಿಕವೊಂದರಲ್ಲೇ 2.4 ಲಕ್ಷ ಸಾವು ಸಂಭವಿಸುವ ಸಾಧ್ಯತೆಯಿದೆ ಎಂದು ಅಮೆರಿಕದ ತಜ್ಞರು ವಿಶ್ಲೇಶಿಸಿದ್ದಾರೆ. ಈವರೆಗೆ ಅಮೆರಿಕದಲ್ಲಿ 34,641 ಜನರು ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 6,78,210ಕ್ಕೆ ಏರಿಕೆಯಾಗಿದೆ.
ಇಟಲಿಯಲ್ಲಿ ಈವರೆಗೆ 22 ಸಾವಿರಕ್ಕಿಂತ ಹೆಚ್ಚು ಜನರು ಅಸುನೀಗಿದ್ದಾರೆ. ಜತೆಗೆ 1.68 ಲಕ್ಷಕ್ಕಿಂತ ಅಧಿಕ ಜನರಿಗೆ ಕೊರೋನಾ ಸೋಂಕಿಂತರಿದ್ದಾರೆ. ಇಟಲಿಯಲ್ಲಿ ಸದ್ಯ ಸರಾಸರಿ 500 ರಿಂದ 650 ಜನರು ಸಾವನ್ನಪ್ಪುತ್ತಿದ್ದಾರೆ.
ಸ್ಪೇನ್‌ನಲ್ಲಿ 19 ಸಾವಿರಕ್ಕಿಂತ ಹೆಚ್ಚು ಜನರು ಸಾವನ್ನಪ್ಪಿದ್ದು, 1.84 ಲಕ್ಷ ಜನರು ಸೋಂಕಿಗೆ ಒಳಗಾಗಿದ್ದಾರೆ. ಜರ್ಮನಿಯಲ್ಲಿ ಒಟ್ಟು 1.38 ಲಕ್ಷ ಜನರು ಸೋಂಕಿಗೆ ಒಳಗಾಗಿದ್ದು, ಈವರೆಗೆ 4,105 ಜನರು ಸಾವನ್ನಪ್ಪಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!