ವಾಷಿಂಗ್ಟನ್: ಬಾಗ್ದಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ನ ಸೇನಾ ಮುಖ್ಯಸ್ಥ ಖಾಸೀಂ ಸೋಲಿಮನಿ ಬಲಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಇನ್ನೂ ಹಲವು ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಬಾಗ್ದಾದ್ ನಲ್ಲಿ ಅಮೆರಿಕದ ರಾಯಭಾರಿ ಕಚೇರಿ ಮೇಲೆ ದಾಳಿ ನಡೆದ ಕೆಲವೇ ದಿನಗಳಲ್ಲಿ ಈ ಪ್ರತಿದಾಳಿ ನಡೆಸಲಾಗಿದೆ. ಅಮೆರಿಕದ ಕ್ರಮವನ್ನು ಇರಾನ್ ಟೀಕಿಸಿದೆ. ಇದು ಮೂರ್ಖತನದ ದಾಳಿ ಎಂದು ಅದು ಹೇಳಿದೆ. ಈ ಮಧ್ಯೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗಿದೆ.