newsics.com
ಕ್ಯಾಲಿಫೋರ್ನಿಯಾ(ಅಮೆರಿಕ): ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್(75) ಅಸ್ವಸ್ಥರಾಗಿದ್ದು, ಅವರನ್ನು ಕ್ಯಾಲಿಫೋರ್ನಿಯಾದ ಇರ್ವಿನ್ ವಿಶ್ವವಿದ್ಯಾಲಯ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಕ್ಲಿಂಟನ್ ಅವರನ್ನು ಮಂಗಳವಾರ (ಅ.12) ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದ್ದು, ವೈದ್ಯರ ತಂಡ ನಿರಂತರ ಚಿಕಿತ್ಸೆ ನೀಡುತ್ತಿದೆ ಎಂದು ಕ್ಲಿಂಟನ್ ವಕ್ತಾರ ಏಂಜಿಲ್ ಯುರೇನಾ ತಿಳಿಸಿದ್ದಾರೆ.
ಕೋವಿಡ್ 19 ಹಾಗೂ ಹೃದಯಸಂಬಂಧಿ ಸಮಸ್ಯೆಯಲ್ಲದ ಕಾರಣಕ್ಕಾಗಿ ಕ್ಲಿಂಟನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕ್ಲಿಂಟನ್ ವಕ್ತಾರರು ತಿಳಿಸಿದ್ದಾರೆ.
ವಿಶ್ವವಿಖ್ಯಾತ ಜಂಬೂಸವಾರಿಗೆ ಸಕಲ ಸಿದ್ಧತೆ, ಇಂದು ನಾಡದೇವಿಯ ಮೆರವಣಿಗೆ