Tuesday, April 13, 2021

ಅಮೆರಿಕ ಉಪಾಧ್ಯಕ್ಷರ ಪತ್ರಿಕಾ ಕಾರ್ಯದರ್ಶಿಗೆ ಕೊರೋನಾ

ವಾಷಿಂಗ್ಟನ್: ಅಮೆರಿಕದ ಉಪಾಧ್ಯಕ್ಷ ಮೈಕ್ ಪೆನ್ಸ್ ಅವರ ಪತ್ರಿಕಾ ಕಾರ್ಯದರ್ಶಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.   ಪತ್ರಿಕಾ ಕಾರ್ಯದರ್ಶಿ ಕ್ಯಾಟೆ ಮಿಲ್ಲರ್ ಅವರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿದೆ. ಅವರನ್ನು  ಪ್ರತ್ಯೇಕವಾಗಿ ಇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಶ್ವೇತ ಭವನದ ಮೂಲಗಳು ಹೇಳಿವೆ.  ಕ್ಯಾಟೆ ಮಿಲ್ಲರ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಲಹೆಗಾರರಾಗಿರುವ ಸ್ಟೀಫನ್ ಮಿಲ್ಲರ್ ಅವರ ಪತ್ನಿಯಾಗಿದ್ದಾರೆ . ಪತ್ರಿಕಾ ಕಾರ್ಯದರ್ಶಿ ಕೊರೋನಾ ಸೋಂಕಿಗೆ ತುತ್ತಾಗಿರುವ ಹಿನ್ನೆಲೆಯಲ್ಲಿ ಉಪಾಧ್ಯಕ್ಷ ಮೈಕ್ ಪೆನ್ಸ್ ಕಚೇರಿಯಲ್ಲಿನ ಸಿಬ್ಬಂದಿಗಳನ್ನು ಕೂಡ ವೈದ್ಯಕೀಯ ತಪಾಸಣೆಗೆ ಗುರಿಪಡಿಸಲಾಗಿದೆ. ಇದೇ ವೇಳೆ. ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನು ಪ್ರತಿದಿನ ಕೊರೋನಾ ಪರೀಕ್ಷೆಗೆ ಗುರಿಪಡಿಸಲಾಗುತ್ತಿದೆ. ಅಮೆರಿಕ ಅಧ್ಯಕ್ಷರ ಆರೋಗ್ಯ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ. ಈ ಹಿನ್ನೆಲೆಯಲ್ಲಿ ಪ್ರತಿದಿನ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಶ್ವೇತ ಭವನ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!