Sunday, December 5, 2021

ಸೆಪ್ಟೆಂಬರ್ ವೇಳೆಗೆ ಕೊರೋನಾಗೆ ಲಸಿಕೆ!

Follow Us

ಲಂಡನ್: ಸೆಪ್ಟೆಂಬರ್ ವೇಳೆಗೆ ಕೊರೋನಾಗೆ ಲಸಿಕೆ ಸಿದ್ಧಗೊಳ್ಳಬಹುದು ಎಂದು ಬ್ರಿಟನ್‌ನ ಔಷಧ ಸಂಶೋಧನಾ ತಂಡಗಳ ಪೈಕಿ ಮುಂಚೂಣಿಯಲ್ಲಿರುವ ತಂಡವೊಂದರ ಮುಖ್ಯಸ್ಥೆ ಸಾರಾ ಗಿಲ್ಬರ್ಟ್ ಹೇಳಿದ್ದಾರೆ.
ಲಸಿಕೆಯ ಮಾನವನ ಮೇಲಿನ ಪ್ರಯೋಗ ಇನ್ನೆರಡು ವಾರಗಳಲ್ಲಿ ಆರಂಭಗೊಳ್ಳಲಿದೆ. ಈ ಔಷಧ ಪರಿಣಾಮಕಾರಿಯಾಗುತ್ತದೆ ಎಂಬ ಬಗ್ಗೆ ನನಗೆ ಶೇ.80ರಷ್ಟು ವಿಶ್ವಾಸವಿದೆ ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಲಸಿಕೆ ಶಾಸ್ತ್ರದ ಪ್ರೊಫೆಸರ್, ವಿಜ್ಞಾನಿ ಸಾರಾ ಗಿಲ್ಬರ್ಟ್ ತಿಳಿಸಿದ್ದಾರೆ.
ಕೊರೋನವೈರಸ್ ಕಾಯಿಲೆಗೆ ಲಸಿಕೆ ಕಂಡುಹಿಡಿಯಲು ಜಗತ್ತಿನಾದ್ಯಂತ ಹತ್ತಾರು ತಂಡಗಳು ಶ್ರಮಿಸುತ್ತಿವೆ. ಈ ಪೈಕಿ ಗಿಲ್ಬರ್ಟ್‌ರ ತಂಡವೂ ಒಂದು. ಲಸಿಕೆಗಳನ್ನು ಅಭಿವೃದ್ಧಿಪಡಿಸಲು ವರ್ಷಗಳೇ ಬೇಕಾಗುತ್ತವೆ ಹಾಗೂ ಕೊರೋನವೈರಸ್‌ಗೆ ಲಸಿಕೆ ತಯಾರಿಸಲು ಕನಿಷ್ಠ 12ರಿಂದ 18 ತಿಂಗಳು ಬೇಕಾಗಬಹುದು ಎಂಬುದಾಗಿ ತಜ್ಞರು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!