Saturday, April 17, 2021

ನಿಷೇಧ ಉಲ್ಲಂಘನೆ; ನೈಜೀರಿಯದಲ್ಲಿ ಬ್ರಿಟಿಷ್ ವಿಮಾನ ಮುಟ್ಟುಗೋಲು

ಅಬುಜ (ನೈಜೀರಿಯ): ಕೋವಿಡ್ ಹರಡುವುದನ್ನು ತಡೆಯಲು ವಿಧಿಸಲಾಗಿರುವ ವಿಮಾನ ಹಾರಾಟ ನಿಷೇಧವನ್ನು ಉಲ್ಲಂಘಿಸಿರುವುದಕ್ಕಾಗಿ ಬ್ರಿಟಿಷ್ ಕಂಪನಿಯ ವಿಮಾನವೊಂದನ್ನು ನೈಜೀರಿಯ ಮುಟ್ಟುಗೋಲು ಹಾಕಿಕೊಂಡಿದೆ.
ನೈಜೀರಿಯದ ವಾಯುಯಾನ ಸಚಿವ ಹದಿ ಸಿರಿಕ ಈ ವಿಷಯ ತಿಳಿಸಿದ್ದಾರೆ. ಸಿಕ್ಕಿಹಾಕಿಕೊಂಡಿರುವ ವಿದೇಶೀಯರನ್ನು ಹೊರಗೆ ಸಾಗಿಸುವ ಅಥವಾ ನೈಜೀರಿಯದ ನಾಗರಿಕರನ್ನು ವಿದೇಶಗಳಿಂದ ಕರೆತರುವ ವಿಮಾನಗಳನ್ನು ಹೊರತುಪಡಿಸಿ ಇತರ ಯಾವುದೇ ಪ್ರಯಾಣಿಕ ವಿಮಾನಗಳನ್ನು ಹಲವು ವಾರಗಳ ಹಿಂದೆಯೇ ನೈಜೀರಿಯ ನಿಷೇಧಿಸಿದೆ. ನಿಷೇಧವು ಜೂನ್ 4ರವರೆಗೆ ಚಾಲ್ತಿಯಲ್ಲಿರುತ್ತದೆ. ಮಾನವೀಯ ನೆಲೆಯಲ್ಲಿ ವಿಮಾನ ಹಾರಿಸಲು ನಾವು ಬ್ರಿಟನ್‌ನ ಕಂಪನಿಯೊಂದಕ್ಕೆ ಅನುಮತಿ ನೀಡಿದ್ದೆವು. ಆದರೆ ಅವರು ವಾಣಿಜ್ಯ ಹಾರಾಟಕ್ಕಾಗಿ ಈ ಅನುಮತಿಯನ್ನು ಬಳಸಿಕೊಂಡಿದ್ದಾರೆ ಎಂದು ಸಚಿವ ಹದಿ ಸಿರಿಕ ತಿಳಿಸಿದರು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!