Saturday, April 17, 2021

ಕೊರೋನಾ ಹುಟ್ಟಿನ ಮಾಹಿತಿಗಾಗಿ ಚೀನಾಗೆ WHO ಭೇಟಿ

ಜಿನೀವಾ: ವಿಶ್ವಕ್ಕೆ ಮಾರಕ ಕೊರೋನಾ ಕಾಣಿಕೆಯಾಗಿ ಕೊಟ್ಟ ಚೀನಾ ಅದರ ಹುಟ್ಟಿನ ಬಗ್ಗೆ ಸ್ಪಷ್ಟ ಮಾಹಿತಿ ಕೊಡುವಲ್ಲಿ ವಿಫಲವಾಗಿದೆ‌. ಹೀಗಾಗಿ ಸೂಕ್ತ ಹಾಗೂ ಸಮಗ್ರ ಮಾಹಿತಿ ಪಡೆಯುವ ನಿಟ್ಟಿನಲ್ಲಿ ವರ್ಲ್ಡ್ ಹೆಲ್ತ್ ಆರ್ಗನೈಸೇಶನ್ (WHO) ಚೀನಾಕ್ಕೆ ಭೇಟಿ ನೀಡಲು ನಿರ್ಧರಿಸಿದೆ.
ಕೊರೋನಾ ವೈರಸ್ ವಿಶ್ವದಾದ್ಯಂತ 5 ಲಕ್ಷ‌ ಮಂದಿಯನ್ನು ಬಲಿ ತೆಗೆದುಕೊಂಡಿದೆ. ಆದರೆ ಚೀನಾ ಮಾತ್ರ ಈ ವೈರಸ್ ಹೇಗೆ ಹುಟ್ಟಿದ್ದು ಹೇಗೆ, ಅದು ಮನುಷ್ಯನಿಗೆ ಅಂಟಿಕೊಂಡಿದ್ದು ಹೇಗೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ನೀಡುವಲ್ಲಿ ಚೀನಾ ವಿಫಲವಾಗಿದೆ. ಹೀಗಾಗಿ ಅಧ್ಯಯನ ನಡೆಸಲು ವಿಶ್ವ ಆರೋಗ್ಯ ಸಂಸ್ಥೆಯ ಅಧ್ಯಯನ ತಂಡ ಚೀನಾಕ್ಕೆ ಭೇಟಿ ನೀಡಲಿದೆ.
ಕೊರೋನಾ ವೈರಸ್ ಕುರಿತು ಮಾಹಿತಿ ಪಡೆದುಕೊಳ್ಳಲು ನಾವು ಚೀನಾಕ್ಕೆ‌ ತೆರಳಲಿದ್ದೇವೆ. ಈ ಬಗ್ಗೆ ಪ್ರಸ್ತಾಪ ಸರ್ಕಾರದ ಮುಂದಿದೆ ಎಂದು ಡಾ.ಸೌಮ್ಯ ಸ್ವಾಮಿನಾಥನ್ ಪ್ರತಿಕ್ರಿಯಿಸಿದ್ದಾರೆ.
ಡಿಸೆಂಬರ್ 31 ರಿಂದ ಚೀನಾದಲ್ಲಿ ನ್ಯುಮೋನಿಯಾ ಪ್ರಕರಣಗಳು ಹೆಚ್ಚಾಗಿದ್ದು ಬಳಿಕ ಅದನ್ನು ಬಾವಲಿಗಳಿಂದ ಬರುವ ನಿಫಾ ವೈರಸ್ ರೀತಿಯ ವೈರಸ್ ಎಂದು ಶಂಕಿಸಲಾಗಿತ್ತು. ಫೆಬ್ರವರಿಯಲ್ಲಿ ಈ ವೈರಸ್ ನ್ನು ನೊವೆಲ್ ಕರೋನಾ ವೈರಸ್ ಎಂದು ಹೆಸರಿಸಲಾಯಿತು.ಬಳಿಕ ಅದನ್ನು ಕೊವಿಡ್ -19 ಎಂದು ಕರೆಯಲಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!