ಲಾಹೋರ್: ದಶಕಗಳ ಬಳಿಕ ನಡೆಯುತ್ತಿರುವ ಟೆಸ್ಟ್ನಲ್ಲಿ ಪಾಕಿಸ್ತಾನ ಮೊದಲ ಗೆಲುವನ್ನು ಎದುರು ನೋಡುತ್ತಿದೆ. ಸದ್ಯ ಕರಾಚಿಯಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ನಲ್ಲಿ ಅಜರ್ ಅಲಿ ಪಡೆ ಗೆಲುವಿನತ್ತ ದಾಪುಗಾಲಿಡುತ್ತಿದೆ.
ದಶಕದ ಬಳಿಕ ಸ್ವದೇಶದಲ್ಲಿ ಶ್ರೀಲಂಕಾ ವಿರುದ್ಧ ಪಾಕಿಸ್ತಾನ ಟೆಸ್ಟ್ ಪಂದ್ಯವನ್ನಾಡುತ್ತಿದೆ. 2009ರಲ್ಲಿ ಶ್ರೀಲಂಕಾ ವಿರುದ್ಧವೇ ಕೊನೆಯ ಬಾರಿ ತನ್ನ ನೆಲದಲ್ಲಿ ಪಾಕ್ ಟೆಸ್ಟ್ ಪಂದ್ಯವಾಡಿತ್ತು. ಲಾಹೋರ್‌ನಲ್ಲಿ 2009ರಲ್ಲಿ ಲಂಕಾ ಆಟಗಾರರ ಮೇಲೆ ಉಗ್ರರ ದಾಳಿ ನಡೆದ ಬಳಿಕ ಪಾಕ್ ತನ್ನ ನೆಲದಲ್ಲಿ ಟೆಸ್ಟ್ ಪಂದ್ಯದ ಆತಿಥ್ಯ ವಹಿಸಿಲ್ಲ.
4ನೇ ದಿನದಾಟದ ಅಂತ್ಯಕ್ಕೆ ಶ್ರೀಲಂಕಾ 7 ವಿಕೆಟ್ ಕಳೆದುಕೊಂಡು 212 ರನ್ ಗಳಿಸಿ ಸೋಲಿನ ಸುಳಿಗೆ ಸಿಲುಕಿದೆ. ಫೆರ್ನಾಂಡೊ ಶತಕ ಬಾರಿಸಿ ಅಜೇಯರಾಗಿ ಉಳಿದಿದ್ದು, ಸೋಮವಾರ (ಡಿ.23) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ದಶಕದ ಬಳಿಕ ಪಾಕ್ ಗೆ ಗೆಲುವಿನ ತವಕ
Follow Us