Tuesday, March 9, 2021

ವುಹಾನ್​ನ ಕೊರೋನಾ ವರದಿ ಮಾಡಿದ್ದ ಮಹಿಳೆಗೆ 4 ವರ್ಷ ಜೈಲು

newsics.com
ಬೀಜಿಂಗ್​: ಚೀನಾದ ವುಹಾನ್​ ನಗರದಿಂದ ಹಬ್ಬಲಾರಂಭಿಸಿದ ಕೊರೋನಾ ಕುರಿತ ಮಾಹಿತಿ ಬಹಿರಂಗಪಡಿಸಿದ್ದ ಮಹಿಳೆಗೆ ಚೀನಾ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ವಕೀಲರಾಗಿರುವ 37 ವರ್ಷದ ಜಾಂಗ್ ಕಳೆದ ಫೆಬ್ರವರಿಯಲ್ಲಿ ವುಹಾನ್​ ನಗರದಿಂದ ನೇರ ವರದಿ ನೀಡುವ ಪ್ರಯತ್ನ ಮಾಡಿದ್ದರು. ವುಹಾನ್ ನಲ್ಲಿ ಕೊರೋನಾ ಬಂದವರನ್ನು ಹೇಗೆ ನಡೆಸಿಕೊಳ್ಳಲಾಗುತ್ತಿದೆ ಎಂಬ ಬಗ್ಗೆ ವರದಿ ಮಾಡಿದ್ದರು. ಆ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲೂ ಹರಿದಾಡಿದ್ದವು.
ಈ ರೀತಿ ವರದಿ ಮಾಡಿದ ಮೂರೇ ತಿಂಗಳಲ್ಲಿ ಅಂದರೆ ಮೇ ತಿಂಗಳಲ್ಲಿ ಜಾಂಗ್​ ಕಾಣೆಯಾಗಿದ್ದರು. ನಂತರ ಆಕೆಯನ್ನು ಬಂಧಿಸಿರುವುದಾಗಿ ಚೀನಾ ಹೇಳಿತ್ತು. ಜಾಂಗ್​ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡಿದ್ದು, ಸುಳ್ಳು ಮಾಹಿತಿ ನೀಡಿರುವ ಆರೋಪದಡಿಯಲ್ಲಿ 4 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಬ್ರಿಟನ್’ನಿಂದ ಬೆಂಗಳೂರಿಗೆ ಬಂದ 26 ಮಂದಿಗೆ ಕೊರೋನಾ ಸೋಂಕು- ಸಚಿವ

ಮತ್ತಷ್ಟು ಸುದ್ದಿಗಳು

Latest News

ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ಸಾಧ್ಯತೆ

newsics.com ಡೆಹ್ರಾಡೂನ್:  ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ನೀಡುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಸಂಜೆ ನಾಲ್ಕು ಗಂಟೆಗೆ ಅವರು ರಾಜ್ಯಪಾಲರನ್ನು ಭೇಟಿ...

ಕೊರೋನಾ ಲಸಿಕೆ ಪಡೆದ 48 ಗಂಟೆ ತನಕ ವಿಮಾನ ಚಲಾಯಿಸುವಂತಿಲ್ಲ

newsics.com ನವದೆಹಲಿ:  ಕೊರೋನಾ ಲಸಿಕೆ ಸ್ವೀಕಾರ ಸಂಬಂಧ ವಿಮಾನಯಾನ ಸಿಬ್ಬಂದಿಗೆ ನಾಗರಿಕ ವಿಮಾನಯಾನ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಮಾನದ ಪೈಲಟ್ ಮತ್ತು ಇತರ ಸಿಬ್ಬಂದಿ ಕೊರೋನಾ ಲಸಿಕೆ ಪಡೆದಿದ್ದರೆ ಇದನ್ನು ಕಟ್ಟು ನಿಟ್ಟಾಗಿ...

ಧೂಪದ ಮರ ಕಡಿಯುವಾಗ ಸಿಲುಕಿ ಮೂವರು ಯುವಕರ ಸಾವು

newsics.comಮಂಗಳೂರು: ಧೂಪದ ಮರ‌ ಕಡಿಯುವ ವೇಳೆ ಮೂವರು ಮರದಡಿ ಸಿಲುಕಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಟ್ರಮೆ ಸಮೀಪ ಮಂಗಳವಾರ ನಡೆದಿದೆ.ಪಟ್ರಮೆ ಗ್ರಾಮದ ಅನಾರು ಬಳಿ‌...
- Advertisement -
error: Content is protected !!