Monday, April 12, 2021

ಲಾಸ್ ಏಂಜಲೀಸ್’ನಲ್ಲಿ ವಿಶ್ವದ ಮೊದಲ ಯೋಗ ವಿವಿ ಆರಂಭ

ನ್ಯೂಯಾರ್ಕ್: ಅಮೆರಿಕದ ಲಾಸ್ ಏಂಜಲೀಸ್‍ನಲ್ಲಿ ವಿಶ್ವದ ಪ್ರಥಮ ಯೋಗ ವಿಶ್ವವಿದ್ಯಾಲಯ ಆರಂಭವಾಗಿದೆ.
ಈ ವಿವಿಗೆ ವಿವೇಕಾನಂದ ಯೋಗ ಯೂನಿವರ್ಸಿಟಿ (ವಯು) ಎಂದು ಹೆಸರಿಡಲಾಗಿದೆ. ಇದು ಭಾರತದ ಹೊರಗೆ ಸ್ಥಾಪನೆಯಾಗಿರುವ ಮೊದಲ ವಿಶ್ವವಿದ್ಯಾಲಯ. ಭಾರತೀಯ ಯೋಗಾಸನಕ್ಕೆ ವೈಜ್ಞಾನಿಕ ವಿಧಾನಗಳ ಮತ್ತು ಅತ್ಯಾಧುನಿಕ ಸಂಶೋಧನೆಗಳ ಮೇಲೆ ಈ ವಿವಿ ಬೆಳಕು ಚೆಲ್ಲಲಿದೆ.
ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ವಿ.ಮುರಳೀಧರನ್ ಅವರು ನ್ಯೂಯಾರ್ಕ್‍ನ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ಕಚೇರಿಯಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವೇಕಾನಂದ ಯೋಗ ವಿವಿಗೆ ಚಾಲನೆ ನೀಡಿದರು.
ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ಕುಲಪತಿ ಮತ್ತು ಭಾರತದ ಖ್ಯಾತ ಯೋಗಗುರು ಡಾ.ಎಚ್.ನಾಗೇಂದ್ರ ಈ ವಿವಿಯ ಪ್ರಥಮ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!